ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಾರ್ಚ್ 17 ರಂದು ಸಂಜೆ 4 ಗಂಟೆಗೆ ರಾಜಭವನದ ಹುಲ್ಲು ಹಾಸಿನ ಆವರಣದಲ್ಲಿ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್,ವಿಧಾನಸಭಾಧ್ಯಕ್ಷ ಯು.ಟಿ.ಖಾದರ್,ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಉತ್ತಮ ಸಾಧನೆಗೈದ 500 ಸ್ಕೌಟ್ಸ್ ಮತ್ತು ಗೈಡ್ ಗಳಿಗೆ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.