ಕೃಷಿ ಸಮಯ ಡೆಸ್ಕ್
ರೈತರು ಹಾಗೂ ಕೃಷಿ ಇಲಾಖೆ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿಗಳು ಸದಾ ಚಿಂತಿಸುತ್ತಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ನಿನ್ನೆ ಅಭಿಮಾನದಿಂದ ನುಡಿದರು.
ಮೇ ೨, ೨೦೨೫ ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಹೋಬಳಿಯ ಅಲ್ಲಾಪಟ್ಟಣ ಗ್ರಾಮದಲ್ಲಿ ಶ್ರೀ ಅನ್ನದಾನೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ (ರಿ.), ಹೆಬ್ಬಾಡಿಹುಂಡಿ ಮತ್ತು ಅಲ್ಲಾಪಟ್ಟಣ ಗ್ರಾಮಸ್ಥರು ಆಯೋಜಿಸಿದ್ದ ಶ್ರೀ ಅನ್ನದಾನೇಶ್ವರಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಮತ್ತು ಗೋಪುರ ಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಕಳೆದ ವರ್ಷ 148 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದೆ. ಇದು ಅಭಿವೃದ್ಧಿಯ ಸಂಕೇತ. ಇದೇ ರೀತಿ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರು.
.
ರಾಜ್ಯದಲ್ಲಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ತೊಂದರೆಯಾಗಬಾರದು, ಅರ್ಹ ರೈತರಿಗೆ ಕೃಷಿ ಉಪಕರಣಗಳಿಗೆ ಸಹಾಯಧನ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ 1000 ಕೋಟಿ ಅನುದಾನ ನೀಡಲಾಗಿದೆ. ರಾಜ್ಯದ ನಾಲೆ, ಕೆರೆಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.
