ಕೃಷಿ ಸಮಯ ಡೆಸ್ಕ್
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಫ್ಲೈಟ್ ಗಳ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಗಳು ಎಂದಿನಂತೆ ಮುಂದುವರೆದಿವೆ; ಆದಾಗ್ಯೂ ಪ್ರಸ್ತುತ ವಿದ್ಯಮಾನಗಳಿಂದಾಗಿ ಭದ್ರತಾ ತಪಾಸಣೆಗಳು ಸಾಮಾನ್ಯಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಹಾಗಾಗಿ ನಿಗಧಿತ ಸಮಯಕ್ಕೆ ಪ್ರಯಾಣಿಕರು ಆಗಮಿಸಿ-ಸಹಕರಿಸಲು ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕರಾದ ಮಹೇಶ್ ಅವರು ಮನವಿ ಮಾಡಿಕೊಂಡಿದ್ದಾರೆ.
ಪ್ರಯಾಣಿಕರ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಮತ್ತು ಕೊನೆಯ ಕ್ಷಣದ ಅನಾನುಕೂಲತೆಯನ್ನು ತಪ್ಪಿಸಲು ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ ಎರಡು ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪಲು ಮನವಿ ಮಾಡಿಕೊಂಡಿದ್ದಾರೆ.
ಇದಲ್ಲದೆ, ಈ ಸಂದರ್ಭದಲ್ಲಿ ಭದ್ರತೆಯ ದೃಷ್ಟಿಯಿಂದ ಯಾವುದೇ ಸಂದರ್ಶಕರ ಪಾಸ್‌ಗಳನ್ನು ನೀಡಲಾಗುವುದಿಲ್ಲ ಮತ್ತು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಬರಮಾಡಿಕೊಳ್ಳಲು ಹಾಗೂ ಬೀಳ್ಕೊಡಲು ಬರುವ ಅತಿಥಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರಯಾಣಿಕರನ್ನು ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಯಾಣಿಕರು ಪರಿಸ್ಥಿತಿಯನ್ನು ಅರ್ಥೈಸಿಕೊಳ್ಳುವ ಮತ್ತು ಸಹಕಾರ ನೀಡುವ ಗುಣವನ್ನು ನಾವು ಪ್ರಶಂಸಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
